Ezekiel 25:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನೆಐಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.
Kannada BSI Bible 2016
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಎದೋವಿುನ ಮೇಲೆ ಕೈಯೆತ್ತಿ ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.
Kannada Bible (KNCL) BSI 2016
ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು.