Ezekiel 25:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನನ್ನ ಇಸ್ರೇಲ್ ಜನರನ್ನು ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನ್ನ ಕೋಪವನ್ನು ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನ್ನು ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು;” ಇದು ನನ್ನ ಒಡೆಯನಾದ ಯೆಹೋವನ ವಾಕ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಎದೋವಿುಗೆ ನನ್ನ ಜನರಾದ ಇಸ್ರಾಯೇಲ್ಯರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋವಿುನ ಅನುಭವಕ್ಕೆ ಬರುವದು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನಾನು ಎದೋಮಿಗೆ ನನ್ನ ಜನರಾದ ಇಸ್ರಯೇಲರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು; ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿತೀರಿಸುವೆನು, ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು, ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು, ಇದು ಸಾರ್ವಭೌಮ ಯೆಹೋವ ದೇವರ ನುಡಿ.’ ”