Ezekiel 25:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದೆಬಷದಿಂದ ನಾಶನವು ಬರುವಂತೆ ಮಾಡಿದ್ದಾರೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಫಿಲಿಷ್ಟಿಯರು ಯೆಹೂದಕ್ಕೆ ಪ್ರತೀಕಾರಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ;
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಫಿಲಿಷ್ಟಿಯರು ಜುದೇಯಕ್ಕೆ ಪ್ರತೀಕಾರ ಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿ ತೀರಿಸುತ್ತಾ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ತೀರಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಯೆಹೂದವನ್ನು ಕೆಡಿಸಿದರು.