Ezekiel 25:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನ್ನು ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನ್ನು ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನೆಐಲ್ಲಾ ನಾಶಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;
Kannada Bible (KNCL) BSI 2016
ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಫಿಲಿಷ್ಟಿಯರ ವಿರುದ್ಧ ನನ್ನ ಕೈಯನ್ನು ಚಾಚುವೆನು. ಕೆರೇತಿಯರನ್ನು ಕಡಿದುಬಿಡುವೆನು: ಉಳಿದವರನ್ನು ಸಮುದ್ರ ತೀರದಲ್ಲಿ ನಾಶಮಾಡುವೆನು.