Ezekiel 25:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕಾಗಿ ನಾನು ನಿಮ್ಮನ್ನು ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಬಂದು ನಿಮ್ಮ ದೇಶವನ್ನು ಕಿತ್ತುಕೊಳ್ಳುವರು. ಅವರ ಸೈನ್ಯವು ಬಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನ್ನು ತಿಂದು ನಿಮ್ಮ ಹಾಲನ್ನು ಕುಡಿಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.
Kannada BSI Bible 2016
ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯ ಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು ನಿನ್ನ ಹಾಲನ್ನು ಕುಡಿದುಬಿಡುವರು.
Kannada Bible (KNCL) BSI 2016
ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರ ವಶವಾಗುವಂತೆ ಮಾಡುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿನ್ನುವರು; ನಿನ್ನ ಹಾಲನ್ನು ಕುಡಿಯುವರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮನ್ನು ಪೂರ್ವದೇಶದ ಜನರಿಗೆ ಸೊತ್ತಾಗಿ ಕೊಡುತ್ತೇನೆ, ಅವರು ತಮ್ಮ ಗುಡಾರಗಳನ್ನು ನಿನ್ನಲ್ಲಿ ನೆಲೆಗೊಳಿಸುವರು. ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿಮ್ಮ ಫಲವನ್ನು ತಿಂದು ನಿಮ್ಮ ಹಾಲನ್ನೇ ಕುಡಿಯುವರು.