Ezekiel 25:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ನಾನು ರಙ್ಬಾ ನಗರವನ್ನು ಒಂಟೆಗಳು ಮೇಯುವ ಸ್ಥಳವನ್ನಾಗಿಯೂ, ಅಮ್ಮೋನ್ ದೇಶವನ್ನು ಕುರಿಹಟ್ಟಿಯನ್ನಾಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
Kannada BSI Bible 2016
ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿಯೂ ಮಾಡುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.
Kannada Bible (KNCL) BSI 2016
ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿ ಹಾಗೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿ ಮಾಡುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.