Ezekiel 25:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕಾಗಿ ನಾನು ನಿಮ್ಮನ್ನು ದಂಡಿಸುವೆನು. ಜನಾಂಗಗಳಿಂದ ನಿಮ್ಮನ್ನು ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನ್ನು ಅಳಿಸಿಹಾಕುವೆನು; ನಿಮ್ಮನ್ನು ನಾಶಮಾಡುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”
Kannada BSI Bible 2016
ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸೂರೆಗಾಗಿ ಮ್ಲೇಚ್ಫರಿಗೆ ವಶಪಡಿಸಿ ಜನಾಂಗಗಳೊಳಗಿಂದ ಕಿತ್ತುಬಿಟ್ಟು ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು,
Kannada Bible (KNCL) BSI 2016
ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ಸುಲಿಗೆಗಾಗಿ ನಿನ್ನನ್ನು ಮ್ಲೇಚ್ಛರಿಗೆ ವಶಪಡಿಸುವೆನು. ಜನಾಂಗಗಳಿಂದ ಕಿತ್ತು, ದೇಶಗಳಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಇತರ ಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಾಂಗಗಳೊಳಗಿಂದ ನಿಮ್ಮನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನ ಹೆಸರನ್ನು ಅಳಿಸಿಬಿಡುವೆನು. ನಾನು ನಿಮ್ಮನ್ನು ನಾಶಮಾಡುವೆನು. ಆಗ ನಾನೇ ಯೆಹೋವ ದೇವರೆಂದು ತಿಳಿಯುವಿರಿ.’ ”