Ezekiel 25:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಮೋವಾಬ್ ಮತ್ತು ಸೇಯೀರ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯೆಹೂದವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, [ವಿಶೇಷವೇನು] ಎಂದು ಮೋವಾಬೂ ಸೇಯೀರೂ ಅಂದುಕೊಂಡದರಿಂದ
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಆಹಾ, ಯೆಹೂದವಂಶ ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು ಎಂದು ಮೋವಾಬ ಹಾಗೂ ಸೇಯೀರ ಹೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.