Ezekiel 26:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಕುದುರೆಗಳ ಗೊರಸುಗಳಿಂದ ಹೊರಟ ಧೂಳು ನಿನ್ನನ್ನು ಮುಚ್ಚಿಬಿಡುವದು. ಅವರ ರಾಹುತರ, ಚಕ್ಕಡಿಗಳ, ರಥಗಳ ಶಘ್ದದಿಂದ ನಿನ್ನ ಗೋಡೆಗಳು ನಡುಗುವವು. ಕೋಟೆಗೋಡೆಗಳು ಕೆಡವಲ್ಪಡುವದರಿಂದ ಅವರು ನಗರದೊಳಗೆ ನುಗ್ಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.
Kannada BSI Bible 2016
ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ದೂಳು ನಿನ್ನನ್ನು ಮುಸುಕುವದು; ಒಡಕುಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಲುಗಳೊಳಗೆ ನುಗ್ಗುವಾಗ ರಾಹುತ, ಚಕ್ಕಡಿಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.
Kannada Bible (KNCL) BSI 2016
ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ಧೂಳು ನಿನ್ನನ್ನು ಮುಸುಕುವುದು; ಒಡಕು ಬಿದ್ದ ಕೋಟೆಯೊಳಗೆ ಶತ್ರು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಸರಕುಗಾಡಿ, ರಥ, ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಅದರುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಸುಕುವದು, ಒಡಕು ಬಿದ್ದ ಕೋಟೆಯೊಳಗೆ ಶತ್ರುಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲುಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವುವು.