Ezekiel 26:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆಘೂಕದೆಐಚ್ಚರನ ಸೈನ್ಯವು ನಿನ್ನ ಐಶಬರ್ಯವನ್ನು ದೋಚಿಕೊಳ್ಳುವದು. ನೀನು ಮಾರಙೇಕೆಂದಿದ್ದ ವಸ್ತುಗಳನ್ನು ಅವರು ದೋಚಿಕೊಳ್ಳುವರು. ನಿನ್ನ ಗೋಡೆಗಳನ್ನು ಒಡೆದು ಅಂದವಾದ ನಿನ್ನ ಮನೆಗಳನ್ನು ಹಾಳು ಮಾಡುವರು. ನಿನ್ನ ಮರದಿಂದ ಮತ್ತು ಕಲ್ಲುಗಳಿಂದ ಮಾಡಿದ ಮನೆಗಳನ್ನು ಕಸದಂತೆ ಸಮುದ್ರಕ್ಕೆ ಎಸೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.
Kannada BSI Bible 2016
ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು ನಿನ್ನ ಸರಕುಗಳನ್ನು ಕೊಳ್ಳೆಹೊಡೆದು ನಿನ್ನ ಗೋಡೆಗಳನ್ನು ಉರುಳಿಸಿ ನಿನ್ನ ವಿನೋದಭವನಗಳನ್ನು ಕಿತ್ತುಹಾಕಿ ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.
Kannada Bible (KNCL) BSI 2016
ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ವಿನೋದಭವನಗಳನ್ನು ಕೆಡವಿ, ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು.