Ezekiel 26:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನ್ನನ್ನು ಬರಿದಾದ ಘಂಡೆಯನ್ನಾಗಿ ಮಾಡುವೆನು. ಸಮುದ್ರದ ತೀರದಲ್ಲಿ ಘಲೆಗಳನ್ನು ಹರಡುವ ಸ್ಥಳವಾಗಿ ನೀನು ಮಾರ್ಪಡುವೆ. ನೀನು ತಿರುಗಿ ಕಟ್ಟಲ್ಪಡುವದಿಲ್ಲ. ಇದು ಒಡೆಯನಾದ ಯೆಹೋವನ ನುಡಿ.” ನನ್ನ ಒಡೆಯನಾದ ಯೆಹೋವನು ಇದನ್ನು ನನಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ಬೋಳುಬಂಡೆ ಮಾಡುವೆನು; ನೀನು ಬಲೆಗಳಿಗೆ ಹಾಸಬಂಡೆಯಾಗುವಿ; ನಿನ್ನ ಮೇಲೆ ಇನ್ನು ಕಟ್ಟಡಕಟ್ಟರು; ಯೆಹೋವನಾದ ನಾನೇ ಅಪ್ಪಣೆಕೊಟ್ಟಿದ್ದೇನೆ; ಇದು ಕರ್ತನಾದ ಯೇಹೋವನ ನುಡಿ.
Kannada Bible (KNCL) BSI 2016
ನಾನು ನಿನ್ನನ್ನು ಬೋಳುಬಂಡೆಮಾಡುವೆನು; ನೀನು ಬಲೆಗಳಿಗೆ ಹಾಸುಬಂಡೆಯಾಗುವೆ; ಇನ್ನು ನೀನು ಪುನಃ ನಿರ್ಮಾಣ ಹೊಂದಲಾರೆ; ಸರ್ವೇಶ್ವರನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ಬೋಳು ಬಂಡೆಯಂತೆ ಮಾಡುವೆನು. ನೀನು ಅಲ್ಲಿ ಬಲೆಹಾಸುವ ಸ್ಥಳವಾಗುವೆ. ನೀನು ಪುನಃ ಕಟ್ಟಲಾಗದೆ ಹೋಗುವಿ. ಯೆಹೋವ ದೇವರಾದ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.