Ezekiel 26:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಘಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದಿಬಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಘಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!
Kannada BSI Bible 2016
ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ನಿನ್ನ ವಿಷಯದಲ್ಲಿ - ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದರು!
Kannada Bible (KNCL) BSI 2016
“ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ: “ ‘ಸಮುದ್ರಗಳ ಬಳಿಯಲ್ಲಿ ವಾಸಿಸಿದವಳೇ, ಪ್ರಸಿದ್ಧ ಪಟ್ಟಣವೇ, ಸಮುದ್ರದ ಮೇಲೆ ಬಲಗೊಂಡ ನಗರವೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದೆ?