Ezekiel 26:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಳವಾದ ಗುಂಡಿಗೆ, ಸತ್ತವರು ಹೋಗುವ ಸ್ಥಳಕ್ಕೆ ನಿನ್ನನ್ನು ಕಳುಹಿಸುವೆನು. ಬೇರೆ ಹಳೇ ನಗರಗಳಂತೆ ನಾನು ಭೂಮಿಯ ಕೆಳಗೆ ನಿನ್ನನ್ನು ಕಳುಹಿಸಿಬಿಡುವೆನು. ಸಮಾಊಯೊಳಗಿರುವವರೊಂದಿಗೆ ನೀನು ಇರುವೆ. ನಿನ್ನಲ್ಲಿ ಆಗ ಯಾರೂ ವಾಸ ಮಾಡುವದಿಲ್ಲ. ನೀನು ಎಂದಿಗೂ ಜೀವಿಸುವವರ ಲೋಕದಲ್ಲಿರುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.
Kannada BSI Bible 2016
ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪುರಾತನಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.
Kannada Bible (KNCL) BSI 2016
ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.