Ezekiel 26:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನಗಾದ ಸ್ಥಿತಿಯನ್ನು ನೋಡಿ ಬೇರೆ ಜನರು ಭಯಗ್ರಸ್ತರಾಗುವರು. ನಿನ್ನ ಅಂತ್ಯವು ಆಯಿತು. ಜನರು ನಿನಗಾಗಿ ಹುಡುಕಾಡುವರು. ಆದರೆ ಅವರು ನಿನ್ನನ್ನು ಕಂಡುಹಿಡಿಯುವುದೇ ಇಲ್ಲ.” ಇವು ಒಡೆಯನಾದ ಯೆಹೋವನ ಮಾತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನಿನ್ನನ್ನು ಪೂರ್ತಿಯಾಗಿ ಧ್ವಂಸಮಾಡುವೆನು; ನೀನು ಇಲ್ಲವಾಗುವೆ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೂ ನಿನ್ನನ್ನು ಭಯಂಕರವಾದ ಅಂತ್ಯಕ್ಕೆ ತರುವೆನು. ಇನ್ನು ಮೇಲೆ ನೀನು ಇರುವುದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡುಕಿದರೂ ನೀನು ಸಿಗುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”