Ezekiel 26:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಉತ್ತರ ದಿಕ್ಕಿನಿಂದ ಒಬ್ಬ ಶತ್ರುವನ್ನು ನಾನು ತೂರಿಗೆ ವಿರುದ್ಧವಾಗಿ ಬರಮಾಡುವೆನು. ಅವನೇ ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು, ಕಾಲ್ಬಲವುಳ್ಳ ದೊಡ್ಡ ಸೈನ್ಯವನ್ನು ತೆಗೆದುಕೊಂಡು ಬರುವನು. ಅವನ ಸೈನಿಕರೆಲ್ಲಾ ಬೇರೆಬೇರೆ ಜನಾಂಗದವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವ, ರಥ, ರಾಹುತ, ಬಹುಜನಪರಿವಾರ ಇವುಗಳಿಂದ ಕೂಡಿದವನನ್ನಾಗಿ ನಾನು ಬಡಗಲಿಂದ ತೂರಿನ ಮೇಲೆ ಬರಮಾಡುವೆನು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ, ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು, ಅಶ್ವ, ರಥ, ರಾಹುತ, ಬಹುಸೈನ್ಯ ಪರಿವಾರ ಇವುಗಳಿಂದ ಕೂಡಿದವನಾಗಿ, ನಾನು ಉತ್ತರದಿಂದ ಟೈರಿನ ಮೇಲೆ ಬರಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ.