Ezekiel 27:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ಪರ್ಶಿಯ, ಲೂದ್ ಮತ್ತು ಪೂಟ್‌ನ ಜನರು ನಿನ್ನ ಸೈನ್ಯದಲ್ಲಿರುವರು. ಅವರು ಯುದ್ಧವೀರರು. ಅವರು ನಿನ್ನ ಗೋಡೆಗಳಲ್ಲಿ ತಮ್ಮ ಗುರಾಣಿ ಮತ್ತು ಶಿರಸ್ತ್ರಾಣಗಳನ್ನು ತೂಗು ಹಾಕಿದರು. ನಿನ್ನ ನಗರಕ್ಕೆ ಘನತೆಯನ್ನು ಅವರು ತಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!
Kannada BSI Bible 2016
ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾರಸಿಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯದ ಭಟರಾಗಿ ಖೇಡ್ಯಶಿರಸ್ತ್ರಾಣಗಳನ್ನು ನಿನ್ನಲ್ಲಿ ನೇತು ಹಾಕಿ ನಿನ್ನನ್ನು ಭೂಷಿಸುತ್ತಿದ್ದರು.
Kannada Bible (KNCL) BSI 2016
“ಪಾರಸಿಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯದ ಭಟರಾಗಿದ್ದರು. ಖೇಡ್ಯ ಶಿರಸ್ತ್ರಾಣಗಳನ್ನು ನಿನ್ನಲ್ಲಿ ನೇತುಹಾಕಿ ನಿನ್ನನ್ನು ಭೂಷಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಪಾರಸಿಯರೂ ಲೂದ್ಯರೂ ಹಾಗೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನೂ ಶಿರಸ್ತ್ರಾಣವನ್ನೂ ನಿನ್ನ ಗೋಡೆಯಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.