Ezekiel 27:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೋಧೆ ದಿಬಪದ ಜನರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ನೀನು ಅನೇಕ ಕಡೆಗಳಲ್ಲಿ ವ್ಯಾಪಾರ ಮಾಡಿದಿ. ಜನರು ದಂತವನ್ನೂ ಬೀಟೆ ಮರಗಳನ್ನೂ ತಂದು ನಿನ್ನೊಂದಿಗೆ ವ್ಯಾಪಾರ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.
Kannada BSI Bible 2016
ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇದಾನಿನವರು ನಿನ್ನ ವರ್ತಕರು; ಬಹು ದ್ವೀಪಗಳ ಉತ್ಪತ್ತಿಯು ನಿನ್ನ ಕೈಗೆ ಸೇರಿತು; ಗಜದಂತಗಳನ್ನೂ ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸಿದರು.
Kannada Bible (KNCL) BSI 2016
ದೆದಾನಿನವರು ನಿನ್ನ ವರ್ತಕರಾಗಿದ್ದರು; ಬಹುದ್ವೀಪಗಳ ಉತ್ಪತ್ತಿ ನಿನ್ನ ಕೈಗೆ ಸೇರಿತ್ತು. ಗಜದಂತಗಳನ್ನೂ, ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ದೆದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದ ಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.