Ezekiel 27:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ಇಸ್ರೇಲ್ ಮತ್ತು ಯೆಹೂದ ದೇಶದವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನ್ನ ವಸ್ತುಗಳಿಗೆ ಗೋಊ, ಆಲೀವ್, ಅಂಜೂರ, ಜೇನು, ಎಣ್ಣೆ ಮತ್ತು ಮುಲಾಮುಗಳನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.
Kannada BSI Bible 2016
ಯೆಹೂದವೂ ಇಸ್ರಾಯೇಲ್‌ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರೂ ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ವಿುನ್ನೀಥಿನ ಗೋದಿ ಕಂಡಸಕ್ಕರೆ ಜೇನು ಎಣ್ಣೆ ಸುಗಂಧತೈಲ ಈ ಸಾಮಗ್ರಿಗಳನ್ನು ನಿನಗೆ ಸೇರಿಸಿದರು.
Kannada Bible (KNCL) BSI 2016
ಯೆಹೂದ್ಯರೂ, ಇಸ್ರಯೇಲ್ ನಾಡಿನವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ, ಗೋಧಿ, ‘ಪನ್ನಗ್’, ಜೇನು, ಎಣ್ಣೆ, ಸುಗಂಧತೈಲ, ಈ ಸಾಮಗ್ರಿಗಳನ್ನು ನಿನಗೆ ಸೇರಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಮಿಠಾಯಿ, ಜೇನು, ಎಣ್ಣೆ ಮತ್ತು ಸುಗಂಧ ತೈಲದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.