Ezekiel 27:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನಿನ್ನೊಂದಿಗೆ ಉತ್ತಮ ಬಟ್ಟೆಗಳು, ಕಸೂತಿ ಕೆಲಸಗಳು, ಬಣ್ಣಬಣ್ಣದ ಜಮಖಾನೆಗಳು, ಹುರಿದ ಹಗ್ಗಗಳು, ದೇವದಾರು ಮರಗಳಿಂದ ಮಾಡಿದ ವಸ್ತುಗಳು ಇವುಗಳೊಂದಿಗೆ ವ್ಯಾಪಾರ ನಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಿನ್ನ ವ್ಯಾಪಾರಿಗಳಾಗಿ, ಉತ್ತಮ ಕಸೂತಿಯ ಧೂಮ್ರ ವರ್ಣದ ನಿಲುವಂಗಿ ಮೊದಲಾದ ಸರಕುಗಳನ್ನೂ, ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರ ವಸ್ತ್ರಗಳ ಪೆಟ್ಟಿಗೆಗಳನ್ನೂ ತಂದರು.
Kannada BSI Bible 2016
ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ವ್ಯಾಪಾರಿಗಳಾಗಿ ಉತ್ತಮಾಂಬರ ಕಸೂತಿಯ ಧೂಮ್ರದ ನಿಲುವಂಗಿ ಮೊದಲಾದ ಮಾಲುಗಳನ್ನೂ ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಗಳಿಸಿದರು.
Kannada Bible (KNCL) BSI 2016
ನಿನ್ನ ವ್ಯಾಪಾರಿಗಳಾಗಿ ಉತ್ತಮಾಂಬರ ಕಸೂತಿಯ ಊದ ನಿಲುವಂಗಿ ಮೊದಲಾದ ಮಾಲುಗಳನ್ನೂ ಹಗ್ಗಗಳಿಂದ ಬಲವಾಗಿ ಬಿಗಿದ ಬಣ್ಣಬಣ್ಣದ ವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಕಳುಹಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಎಂದರೆ ಸುಂದರವಾದ ಬಟ್ಟೆಗಳು, ನೀಲಿಬಟ್ಟೆಗಳು, ಕಸೂತಿಯ ಕೆಲಸ ಮತ್ತು ಹಗ್ಗಗಳಿಂದ ಬಲವಾಗಿ ಬಿಗಿದ ಬಣ್ಣಬಣ್ಣದ ವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಕಳುಹಿಸುತ್ತಿದ್ದರು.