Ezekiel 27:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ವ್ಯಾಪಾರಿಗಳು ಸಮುದ್ರದಾಚೆ ಹೋದರು; ನೀನು ಅನೇಕರನ್ನು ತೃಪ್ತಿಗೊಳಿಸಿದಿ. ನಿನ್ನ ಐಶಬರ್ಯದಿಂದಲೂ ನೀನು ಮಾರಿದ ಸರಕುಗಳಿಂದಲೂ ನೀನು ಲೋಕದ ರಾಜರನ್ನು ಐಶಬರ್ಯವಂತರನ್ನಾಗಿ ಮಾಡಿದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸರಕುಗಳು ಸಮುದ್ರಗಳನ್ನು ದಾಟಿ ಹರಡಿಕೊಂಡವು, ಅವುಗಳಿಂದ ಅನೇಕ ಜನಾಂಗಗಳನ್ನು ತೃಪ್ತಿಪಡಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ, ವ್ಯಾಪಾರದ ವಸ್ತುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ.
Kannada BSI Bible 2016
ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸರಕುಗಳು ಸಮುದ್ರಗಳನ್ನು ಹಾದು ಹರಡಿಕೊಂಡವು. ಅವುಗಳಿಂದ ಬಹುಜನಾಂಗಗಳನ್ನು ತುಂಬಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ.
Kannada Bible (KNCL) BSI 2016
ಅಪಾರ ಐಶ್ವರ್ಯದಿಂದ, ವಾಣಿಜ್ಯ ದಿನಸುಗಳಿಂದ ನೀನು ತುಂಬಿಸಿದೆ ಬಹುರಾಷ್ಟ್ರಗಳನು, ಸಮೃದ್ಧಿಗೊಳಿಸಿದೆ ಭೂರಾಜರನು. ಈಗಾಗಿವೆ ಸಮುದ್ರದ ಪಾಲು ಆ ಸರಕು ಸಾಮಗ್ರಿಗಳೆಲ್ಲವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ. ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದೆ.