Ezekiel 27:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಈಗ ಸಮುದ್ರದ ನೀರಿನಿಂದ ಮುರಿದುಬಿದ್ದಿರುವೆ. ಆಳವಾದ ನೀರಿನಲ್ಲಿ ಮುಳುಗಿಸಲ್ಪಟ್ಟಿರುವೆ. ನೀನು ಮಾರುವ ಸರಕುಗಳೂ ನಿನ್ನ ಜನರೂ ಬಿದ್ದುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ, ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಳುಗಿ ಹೋದರು.
Kannada BSI Bible 2016
ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಲಾದರೋ ನೀನು ಸಮುದ್ರದಿಂದ ಹಾಳಾದಿ. ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಣುಗಿಹೋದರು.
Kannada Bible (KNCL) BSI 2016
ಮುಳುಗಿಹೋದರು ಅಗಾಧ ಜಲದೊಳು ಸರಕುಸಮೇತ ನಿನ್ನ ಸೇರಿದ್ದ ಜನರು; ಹಾಳಾದೆ ನೀನು ಸಮುದ್ರ ಸಾಗರದೊಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಆಗಾಧಜಲದಲ್ಲಿ ಮುಳುಗಿ ಹೋದರು.