Ezekiel 27:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕರಾವಳಿಯಲ್ಲಿ ವಾಸಿಸುವ ಜನರೆಲ್ಲರೂ ನಿನ್ನ ವಾರ್ತೆಯನ್ನು ಕೇಳಿ ಚಕಿತರಾದರು. ಅವರ ರಾಜರು ದಂಗುಘಡಿದವರಾಗಿ ಭಯಭೀತರಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರಾವಳಿಯ ಸಮಸ್ತ ನಿವಾಸಿಗಳು ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ; ಅರಸರು ಭಯಪಟ್ಟಿದ್ದಾರೆ. ಅರಸರು ನಡುಗಿ ಭೀತಿಗೊಂಡಿದ್ದಾರೆ.
Kannada BSI Bible 2016
ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರಾವಳಿಯ ಸಮಸ್ತನಿವಾಸಿಗಳು ನಿನ್ನ ಗತಿಗೆ ಬೆಚ್ಚಿಬಿದ್ದಿದ್ದಾರೆ; ರಾಜರು ಮೊಗಗೆಟ್ಟು ರೋಮಾಂಚಿತರಾಗಿದ್ದಾರೆ.
Kannada Bible (KNCL) BSI 2016
ನಿನ್ನೀ ಗತಿಗೆ ಬೆರಗಾಗಿಹರು ಕರಾವಳಿಯ ಸರ್ವನಿವಾಸಿಗಳು, ರೋಮಾಂಚಿತರಾಗಿಹರು ಮೊಗಗೆಟ್ಟು ರಾಜರಾಜರುಗಳು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಭಯಭೀತರಾಗಿದ್ದಾರೆ. ಅವರ ಅರಸರು ಬಹಳವಾಗಿ ಭಯಪಟ್ಟಿದ್ದಾರೆ. ರಾಜರು ನಡುಗಿ ಭೀತಿಗೊಂಡರು.