Ezekiel 27:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಷಾನಿನ ಅಲ್ಲೋನ್ ಮರಗಳಿಂದ ಹುಟ್ಟುಗಳನ್ನು ತಯಾರಿಸಿದರು. ನಿನ್ನ ಮೇಲ್ಮಾಳಿಗೆಯನ್ನು ಕಿತ್ತೀಮ್ ದಿಬಪದ ತಿಲಕದ ಮರಗಳಿಂದ ಮಾಡಿದರು. ಅದನ್ನು ದಂತಗಳಿಂದ ಶೃಂಗರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ.
Kannada BSI Bible 2016
ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್‌ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಹುಟ್ಟುಗಳನ್ನು ರೂಪಿಸಿ ಕಿತ್ತೀಮ್ ದ್ವೀಪದ ತಿಲಕದ ಹಲಿಗೆಯಿಂದ ನಿನ್ನ ಮೇಲ್ಮಾಳಿಗೆಯನ್ನು ಕಟ್ಟಿ ದಂತದಿಂದ ಕೆತ್ತಿದರು.
Kannada Bible (KNCL) BSI 2016
ನಿನ್ನ ಹುಟ್ಟುಗಳು ರೂಪಿಸಲಾಗಿವೆ ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಮೇಲ್ಮಾಳಿಗೆ ಕಟ್ಟಲಾಗಿದೆ ಕಿತ್ತೀಮ್ ದ್ವೀಪದ ತಿಲಕ ಹಲಗೆಯಿಂದ, ಕೆತ್ತಲಾಗಿದೆ ದಂತದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಹುಟ್ಟುಗೋಲನ್ನು ಬಾಷಾನಿನ ಅಲ್ಲೋನ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಮ್ ದ್ವೀಪಗಳಿಂದ ತಂದ ಹಲಗೆಗಳಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಶೃಂಗರಿಸಿದ್ದಾರೆ.