Ezekiel 27:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನಲ್ಲಿ ತಯಾರಿಸಿದ ಘಣ್ಣದ ನಾರುಮಡಿಯನ್ನು ನಿನ್ನ ಹಾಯಿಗಳಿಗಾಗಿ ಉಪಯೋಗಿಸಿದರು. ಆ ಹಾಯಿಯು ನಿನ್ನ ಧ್ವಜವಾಯಿತು. ನಿನ್ನ ಮೇಲ್ಮಾಳಿಗೆಯ ಹೊದಿಕೆಯು ನೀಲ ಮತ್ತು ಧೂಮ್ರ ವರ್ಣದವುಗಳಾಗಿದ್ದವು. ಅವು ಸೈಪ್ರಸ್ ದಿಬಪದಿಂದ ಘಂದವುಗಳಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ.
Kannada BSI Bible 2016
ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಹಾಯಿಯು ನಿನಗೆ ಧ್ವಜವೂ ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟು ಎಲೀಷಕರಾವಳಿಯ ಧೂಮ್ರರಕ್ತವರ್ಣಗಳಿಂದ ಚಿತ್ರಿತವಾಗಿತ್ತು.
Kannada Bible (KNCL) BSI 2016
ನಿನ್ನ ಹಾಯಿ ನಿನಗೆ ಧ್ವಜವಾಗಲೆಂದೆ ಮಾಡಿಹರು ಈಜಿಪ್ಟಿನ ಕಸೂತಿಯ ನಾರುಮಡಿಯಿಂದ. ನಿನ್ನ ಮೇಲ್ಕಟ್ಟು ಚಿತ್ರಿತವಾಗಿದೆ ಎಲೀಷ ಕರಾವಳಿಯ ಊದಾ ಕಡುಗೆಂಪುಗಳಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು ಮತ್ತು ಅದು ನಿನ್ನ ಧ್ವಜವಾಗಿತ್ತು. ನಿಮ್ಮ ಮೇಲ್ಕಟ್ಟುಗಳು ಎಲೀಷ ಕರಾವಳಿಯಿಂದ ನೀಲಿ ಮತ್ತು ನೇರಳೆ ಬಣ್ಣದ್ದಾಗಿದ್ದವು.