Ezekiel 27:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೆಘಲಿನ ಹಿರಿಯರೂ ಜ್ಞಾನಿಗಳೂ ನಿನ್ನ ಹಡಗುಗಳ ಬಿರುಕುಗಳನ್ನು ಸರಿಪಡಿಸುವವರಾಗಿದ್ದರು. ಸಾಗರದ ಹಡಗುಗಳೂ ಅದರ ನಾವಿಕರೂ ನಿನ್ನೊಂದಿಗೆ ವ್ಯಾಪಾರ ಮಾಡಲು ಘಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನಲ್ಲಿ ಸೇರಿಕೊಂಡಿದ್ದ ಗೇಬಾಲಿನ ಹಿರಿಯರೂ ಮತ್ತು ಜಾಣರೂ ನಿನ್ನ ಬಿರುಕುಗಳನ್ನು ಮುಚ್ಚಿದ್ದಾರೆ. ಸಮುದ್ರದ ಸಕಲ ನಾವೆಗಳ ಮತ್ತು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು, ನಿನಗೆ ಸರಕುಗಳನ್ನು ತಂದೊಪ್ಪಿಸಿದ್ದಾರೆ.
Kannada BSI Bible 2016
ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನಲ್ಲಿ ಸೇರಿಕೊಂಡಿದ್ದ ಗೆಬಲಿನ ಹಿರಿಯರೂ ಜಾಣರೂ ನಿನ್ನ ಕಂಡಿಗಳನ್ನು ಭದ್ರಪಡಿಸುವವರು. ಸಮುದ್ರದ ಸಕಲ ನಾವೆಗಳು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು,
Kannada Bible (KNCL) BSI 2016
ನಿನ್ನ ಕಂಡಿಗಳ ಭದ್ರಪಡಿಸಿಹರು, ನಿನ್ನಲ್ಲಿ ಸೇರಿದ್ದ ಗೆಬಲಿನ ಜಾಣರು, ಹಿರಿಯರು. ನಿನಗೆ ಸರಕುಗಳ ತಂದೊಪ್ಪಿಸುತ್ತಿದ್ದರು ಸಕಲ ನಾವೆಗಳು, ಸಕಲ ನಾವಿಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೆಬಾಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು.