Ezekiel 28:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ತೂರ್ ದೇಶದ ರಾಜನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “‘ನೀನೊಬ್ಬ ಆದರ್ಶ ಮನುಷ್ಯನಾಗಿದ್ದೆ. ಸರ್ವಾಂಗಸುಂದರನೂ ಜ್ಞಾನದಿಂದ ತುಂಬಿದವನೂ ಆಗಿದ್ದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.
Kannada BSI Bible 2016
ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕಗೀತವನ್ನೆತ್ತು, ಅವನಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಸರ್ವಸುಲಕ್ಷಣಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರ.
Kannada Bible (KNCL) BSI 2016
“ನರಪುತ್ರನೇ, ನೀನು ಟೈರಿನ ಅರಸನನ್ನು ಕುರಿತು ಶೋಕಗೀತೆಯೊಂದನ್ನು ಹಾಡಿ ಅವನಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: - “ನೀನು ಸರ್ವಸುಲಕ್ಷಣ ಶಿರೋಮಣಿ ಪರಿಪೂರ್ಣ ಸುಂದರ, ಪೂರ್ಣಜ್ಞಾನಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಟೈರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಸರ್ವಸುಲಕ್ಷಣ ಶಿರೋಮಣಿ. ಸಂಪೂರ್ಣಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.