Ezekiel 28:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಆರಿಸಲ್ಪಟ್ಟ ಕೆರೂಬಿಯರಲ್ಲಿ ಒಬ್ಬನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿದ್ದವು ನಾನು ನಿನ್ನನ್ನು ದೇವರ ಪವಿತ್ರ ಪರ್ವತದಲ್ಲಿಟ್ಟೆನು. ನೀನು ಬೆಂಕಿಯಂತೆ ಹೊಳೆಯುವ ರತಐಗಳ ಮೇಲೆ ನಡೆದಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.
Kannada BSI Bible 2016
ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ರೆಕ್ಕೆತೆರೆದು ನೆರಳುಕೊಡುವ ಕೆರೂಬಿಯಾಗಿದ್ದಿ; ನಾನು ನಿನ್ನನ್ನು ದೇವರ ಪರಿಶುದ್ಧಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಕೆಂಡದ ಮಳೆಯಲ್ಲಿ ವಿಹಾರಮಾಡುತ್ತಾ ಇದ್ದಿ.
Kannada Bible (KNCL) BSI 2016
ರೆಕ್ಕೆ ತೆರೆದು ನೆರಳು ನೀಡುವ ಕೆರೂಬಿ ನೀನಾಗಿದ್ದೆ ದೇವರ ಪರಿಶುದ್ಧ ಮರೆಯಲ್ಲಿ ನಿನ್ನ ನಾ ನೆಲೆಗೊಳಿಸಿದ್ದೆ. ಕೆಂಡದ ಮಡುಮಧ್ಯೆ ನೀ ವಿಹಾರಮಾಡುತ್ತಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ರಕ್ಷಕ ಕೆರೂಬಿಯಾಗಿ ಅಭಿಷೇಕಹೊಂದಿದೆ. ನಾನೇ ನಿನ್ನನ್ನು ನೇಮಿಸಿದ್ದೇನೆ. ನೀನು ದೇವರ ಪರಿಶುದ್ಧ ಪರ್ವತದ ಮೇಲೆ ಇದ್ದೆ; ನೀನು ಉರಿಯುತ್ತಿರುವ ಕಲ್ಲುಗಳ ನಡುವೆ ನಡೆದೆ.