Ezekiel 28:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಸೌಂದರ್ಯವು ನಿನಗೆ ಹೆಮ್ಮೆ ಏರುವಂತೆ ಮಾಡಿತು. ನಿನ್ನ ಘನತೆಯು ನಿನ್ನ ಜ್ಞಾನವನ್ನು ಕೆಡಿಸಿತು. ಆದ್ದರಿಂದ ನಿನ್ನನ್ನು ನೆಲಕ್ಕೆ ದಬ್ಬಿದೆ. ಈಗ ಬೇರೆ ರಾಜರುಗಳು ನಿನ್ನನ್ನೆ ಎವೆಯಿಕ್ಕದೆ ನೋಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.
Kannada BSI Bible 2016
ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಿನ್ನ ಸೊಬಗಿನ ನಿವಿುತ್ತ ಉಬ್ಬಿದ ಮನಸ್ಸುಳ್ಳವನಾಗಿ ನಿನ್ನ ಮೆರೆತದಿಂದ ನಿನ್ನ ಬುದ್ಧಿಯನ್ನು ಹಾಳುಮಾಡಿಕೊಂಡಿ; ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗುವಂತೆ ಅವರ ಕಣ್ಣಮುಂದೆ ಹಾಕಿದೆನು.
Kannada Bible (KNCL) BSI 2016
ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.