Ezekiel 28:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಅನೇಕ ತಪ್ಪುಗಳನ್ನು ಮಾಡಿದೆ. ನೀನು ಮೋಸಗಾರನಾದ ವ್ಯಾಪಾರಿ. ಇದರಿಂದಾಗಿ ನೀನು ಪವಿತ್ರಸ್ಥಳವನ್ನು ಹೊಲೆ ಮಾಡಿರುವಿ. ಆದ್ದರಿಂದ ನಿನೊಐಳಗೆ ಬೆಂಕಿಯನ್ನುಟು ಮಾಡಿ ಅದು ನಿನ್ನನ್ನು ದಹಿಸುವಂತೆ ಮಾಡಿದೆನು. ನೀನು ಸುಟ್ಟ ಬೂದಿಯಾದೆ. ಈಗ ಎಲ್ಲರೂ ನಿನ್ನ ಲಜ್ಜಾತನವನ್ನು ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು.
Kannada BSI Bible 2016
ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಅಪಾರವಾದ ಅಪರಾಧಗಳಿಂದಲೂ ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದಿ; ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿಮಾಡಿಬಿಟ್ಟೆನು;
Kannada Bible (KNCL) BSI 2016
ಅಪಾರ ಅಪರಾಧಗಳಿಂದ, ಅನ್ಯಾಯ ವ್ಯಾಪಾರಗಳಿಂದ ನಿನ್ನಲ್ಲಿನ ಪವಿತ್ರಾಲಯ ಅಶುದ್ಧವಾಯಿತು ನಿನ್ನಿಂದ. ಎಂದೇ, ನಾ ಬರಮಾಡಿದೆ ಬೆಂಕಿಯನು ನಿನ್ನೊಳಗಿಂದ ನೋಡ್ವರೆಲ್ಲರ ಮುಂದೆ ಸುಟ್ಟು ಭಸ್ಮ ಮಾಡಿತು ನಿನ್ನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಅಪಾರವಾದ ಪಾಪಗಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿಬಿಟ್ಟಿತು. ನೋಡುವವರೆಲ್ಲರ ಮುಂದೆ ನಿನ್ನನ್ನು ಬೂದಿಮಾಡುವೆನು.