Ezekiel 28:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇರೆ ಜನಾಂಗಗಳ ಜನರು ನಿನಗೆ ಆದದ್ದನ್ನು ನೋಡಿ ಬೆಚ್ಚಿಬೆರಗಾದರು. ನಿನಗಾದ ದುಸ್ಥಿತಿಯು ಜನರನ್ನು ಭಯಪಡಿಸಿತು. ನಿನ್ನ ಅಂತ್ಯವಾಯಿತು!”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ಸಂಪೂರ್ಣ ನಾಶವಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’”
Kannada BSI Bible 2016
ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ತೀರಾ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾದಿ.
Kannada Bible (KNCL) BSI 2016
ನಿನ್ನೀ ಗತಿ ನೋಡಿ ಬೆರಗಾದರು ನಿನ್ನನ್ನರಿತ ರಾಷ್ಟ್ರಗಳು ಪೂರ್ತಿಯಾಗಿ ನೀ ಧ್ವಂಸವಾದೆ, ಇಲ್ಲವಾದೆ ಇನ್ನೆಂದಿಗೂ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ಭಯಗೊಳ್ಳುವರು. ನೀನು ಸಂಪೂರ್ಣ ಭೀತಿಗೊಳಗಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’ ”