Ezekiel 28:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಘಹಳ ಹೆಮ್ಮೆಯುಳ್ಳವನು. ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ. ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.
Kannada BSI Bible 2016
ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.
Kannada Bible (KNCL) BSI 2016
“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.