Ezekiel 28:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಈ ಮಾತುಗಳನ್ನು ಹೇಳಿದನೆಂದು ಅವನಿಗೆ ತಿಳಿಸು: “‘ಚೀದೋನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನ ಜನರು ನನ್ನನ್ನು ಗೌರವಿಸಲು ಕಲಿಯುವರು. ನಾನು ಚೀದೋನನ್ನು ಶಿಕ್ಷಿಸಿದಾಗ ನಾನೇ ಯೆಹೋವನೆಂದು ಜನರಿಗೆ ಗೊತ್ತಾಗುವದು. ನಾನು ಪವಿತ್ರನು ಎಂದು ಅವರು ತಿಳಿದು ಆ ರೀತಿಯಾಗಿ ಅವರು ನನ್ನೊಂದಿಗೆ ವರ್ತಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.
Kannada BSI Bible 2016
ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಚೀದೋನೇ, ನಾನು ನಿನಗೆ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣವನ್ನು ದಂಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ನಾನೇ ಯೆಹೋವನು ಎಂದು ಎಲ್ಲರಿಗೂ ಗೊತ್ತಾಗುವದು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.