Ezekiel 28:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚೀದೋನಿಗೆ ನಾನು ರೋಗಮರಣಗಳನ್ನು ಕಳುಹಿಸುವೆನು. ನಗರದೊಳಗೆ ವಾಸಿಸುವ ಅನೇಕ ಮಂದಿ ಸಾಯುವರು. ನಗರದ ಹೊರಗೆ ಖಡ್ಗವು ಅನೇಕರನ್ನು ಕೊಲ್ಲುವದು, ಆಗ ಅವರು ನಾನು ಯೆಹೋವನೆಂದು ತಿಳಿಯುವರು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು’ ಎಂದು ಅವರಿಗೆ ತಿಳಿದು ಬರುವುದು.
Kannada BSI Bible 2016
ಅದರಲ್ಲಿ ವ್ಯಾಧಿಯನ್ನೂ ಬೀದಿಗಳಲ್ಲಿ ರಕ್ತವನ್ನು ಕಳುಹಿಸುವೆನು; ಸುತ್ತಲೂ ಅದಕ್ಕೆ ವಿರುದ್ಧವಾಗಿ ಕತ್ತಿಯಿಂದ ಹತವಾದವರು ಅದರಲ್ಲಿ ಬೀಳುವರು; ಆಗ ನಾನೇ ಕರ್ತನೆಂದು ತಿಳಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರಲು ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿದುಬರುವದು.
Kannada Bible (KNCL) BSI 2016
ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು, ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು, ಆಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿದುಬರುವುದು.