Ezekiel 28:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಘಹು ದೊಡ್ಡ ಕಂಟಕವು ಘಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಘಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು” ಎಂದು ಅವರಿಗೆ ತಿಳಿಯುವುದು.
Kannada BSI Bible 2016
ಇಸ್ರಾಯೇಲ್ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನಾಗದು; ನಾನೇ ಕರ್ತನಾದ ಯೆಹೋವನು ಎಂದು ಅವರಿಗೆ ವ್ಯಕ್ತವಾಗುವದು.
Kannada Bible (KNCL) BSI 2016
ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು, ಹೀನೈಸುವ ನೆರೆಹೊರೆಯವರೆಂಬ ಮುಳ್ಳಿನ ಬಾಧೆ ಇನ್ನಾಗದು. ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.