Ezekiel 28:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿತೋಟಗಳನ್ನು ಮಾಡುವರು. ಅವರನ್ನು ದೆಬಷೀಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”
Kannada BSI Bible 2016
ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ನಿರ್ಭಯವಾಗಿರುವರು, ಮನೆಗಳನ್ನು ಕಟ್ಟಿಕೊಂಡು ತೋಟಗಳನ್ನು ಮಾಡಿಕೊಂಡು ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರಿಗೆ ನಾನು ದಂಡನೆಮಾಡಿದ ಮೇಲೆ ನಾನೇ ತಮ್ಮ ದೇವರಾದ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.
Kannada Bible (KNCL) BSI 2016
ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”