Ezekiel 29:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಾನು ನಿನಗೆ ವಿರೋಧವಾಗಿರುತ್ತೇನೆ. ನೈಲ್ ನದಿಯ ಅನೇಕ ಶಾಖೆಗಳಿಗೂ ನಾನು ವಿರೋಧವಾಗಿದ್ದೇನೆ. ಈಜಿಪ್ಟನ್ನು ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಮಿಗ್ದೋಲ್‌ನಿಂದ ಅಸಾಬನ್ ತನಕ ಇರುವ ಪಟ್ಟಣಗಳು ಬರಿದಾಗುವವು. ಇಥಿಯೋಪ್ಯದ ಮೇರೆಯ ತನಕವೂ ಬರಿದಾಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು.
Kannada BSI Bible 2016
ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಐಗುಪ್ತದೇಶವನ್ನು ವಿುಗ್ದೋಲಿನಿಂದ ಸೆವೇನೆಯ ತನಕ, ಹೌದು ಕೂಷಿನ ಎಲ್ಲೆಯವರೆಗೂ ತೀರಾ ಹಾಳುಪಾಳು ಮಾಡುವೆನು.
Kannada Bible (KNCL) BSI 2016
ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ತನಕ, ಹೌದು, ಸುಡಾನ್ ಎಲ್ಲೆಯವರೆಗೂ ಪೂರ್ತಿಯಾಗಿ ಹಾಳುಪಾಳುಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಗೋ, ನಾನು ನಿನಗೂ ನಿನ್ನ ನದಿಗಳಿಗೂ ವಿರುದ್ಧವಾಗಿದ್ದೇನೆ. ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.