Ezekiel 29:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಯಾವ ಮಹತಬವೂ ಇಲ್ಲದ ರಾಜ್ಯವಾಗಿರುವುದು. ಬೇರೆ ರಾಜ್ಯಗಳಿಗಿಂತ ಅದು ಎಂದಿಗೂ ಉನ್ನತಸ್ಥಾನದಲ್ಲಿರದು. ಅದು ಅಷ್ಟು ಚಿಕ್ಕ ರಾಜ್ಯವಾಗುವುದರಿಂದ ಬೇರೆ ದೇಶಗಳ ಮೇಲೆ ಅಊಕಾರ ನಡೆಸದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಸ್ಥಿತಿಗೆ ತರುವೆನು.
Kannada BSI Bible 2016
ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ರಾಜ್ಯವು ಸಮಸ್ತರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವದು; ವಿುಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಗತಿಗೆ ತರುವೆನು.
Kannada Bible (KNCL) BSI 2016
ಆ ರಾಜ್ಯ ಸಮಸ್ತ ರಾಜ್ಯಗಳಲ್ಲಿ ಕನಿಷ್ಟವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಆ ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣಗತಿಗೆ ತರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು.