Ezekiel 29:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಅವರ ಮೇಲೆ ಇನ್ನು ಎಂದಿಗೂ ಭರವಸವಿಡುವುದಿಲ್ಲ. ಇಸ್ರೇಲರು ಸಹಾಯಕ್ಕಾಗಿ ದೇವರ ಬಳಿಗೆ ಹೋಗದೆ ಈಜಿಪ್ಟಿನವರ ಮೇಲೆ ಭರವಸವಿಟ್ಟಿದ್ದ ಪಾಪವನ್ನು ಅರಿತುಕೊಳ್ಳುವರು. ಆಗ ಅವರು ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು’” ಎಂದು ಅವರಿಗೆ ತಿಳಿಯುವುದು.
Kannada BSI Bible 2016
ಇನ್ನು ಅದು ಇಸ್ರಾಯೇಲ್‌ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸವಾಗದು; ಮತ್ತು ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲ್ಯರಲ್ಲಿ ಐಗುಪ್ತದಿಂದ ಇನ್ನು ಹುಟ್ಟದು. ನಾನೇ ಯೆಹೋವನು ಎಂದು ಅವರಿಗೆ ಮನದಟ್ಟಾಗುವದು.
Kannada Bible (KNCL) BSI 2016
ಈಜಿಪ್ಟ್ ಇನ್ನು ಇಸ್ರಯೇಲ್ ವಂಶದವರ ಭರವಸೆಯಾಗದು; ಅದರ ಕಡೆಗೆ ಕಣ್ಣೆತ್ತುವಾಗ ದೇವದ್ರೋಹದ ನೆನಪು ಇಸ್ರಯೇಲರಲ್ಲಿ ಹುಟ್ಟುವುದು; ನಾನೇ ಸರ್ವೇಶ್ವರ ಎಂದು ಅವರಿಗೆ ಮನದಟ್ಟಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಅದು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಇವರು ಅವರ ಕಡೆಗೆ ನೋಡಿದಾಗ ಪಾಪವನ್ನು ಜ್ಞಾಪಕಕ್ಕೆ ತರುವರು. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”