Ezekiel 29:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ತನ್ನ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡೆಸಿದನು. ಪ್ರತಿ ಸೈನಿಕನ ತಲೆಯನ್ನು ಬೋಳಿಸಿದರು. ಪ್ರತಿಯೊಬ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಘೂಕದೆಐಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನ್ನು ಸೋಲಿಸಲು ಘಹಳವಾಗಿ ಪ್ರಯಾಸಪಡಙೇಕಾಗಿ ಘಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಲಿಲ್ಲ.”
Kannada BSI Bible 2016
ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್‌ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆಹಾಕಿ ತನ್ನ ಸೈನಿಕರಿಂದ ಬಹುಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ತೂರಿನಿಂದ ಸಂಬಳವೇನೂ ಸಿಕ್ಕಲಿಲ್ಲ.
Kannada Bible (KNCL) BSI 2016
“ನರಪುತ್ರನೇ, ಬಾಬಿಲೋನಿನ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಬಹು ಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ. ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರಿನಿಂದ ಫಲವೇನೂ ಸಿಕ್ಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರನಿಂದ ಪ್ರತಿಫಲವೇನೂ ದೊರೆಯಲಿಲ್ಲ.