Ezekiel 29:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ರಾಜನಾದ ನೆಘೂಕದೆಐಚ್ಚರನಿಗೆ ನಾನು ಈಜಿಪ್ಟ್ ದೇಶವನ್ನು ಕೊಡುವೆನು. ನೆಘೂಕದೆಐಚ್ಚರನು ಈಜಿಪ್ಟಿನವರನ್ನು ಸೆರೆಹಿಡಿದು ಕೊಂಡೊಯಬನು. ಈಜಿಪ್ಟಿನ ಬೆಲೆಬಾಳುವ ವಸ್ತುಗಳನೆಐಲ್ಲಾ ದೋಚುವನು. ಇದು ಅವನ ಸೈನಿಕರ ಸಂಘಳವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.
Kannada BSI Bible 2016
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುವೆನು; ಅವನು ಅದರ ಜನ ಯಾವತ್ತನ್ನು ಒಯ್ದು ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಂಬಳ.
Kannada Bible (KNCL) BSI 2016
ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುವೆನು; ಅವನು ಅದರ ಜನರನ್ನೂ ಆಸ್ತಿಪಾಸ್ತಿಯನ್ನೂ ಒಯ್ದು, ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಿಕ್ಕುವ ಸಂಬಳ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಅದರ ಕೊಳ್ಳೆಯನ್ನೂ ಅದರ ಸುಲಿಗೆಯನ್ನೂ ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವುದು.