Ezekiel 29:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೆಘೂಕದೆಐಚ್ಚರನು ಪ್ರಯಾಸದ ಕೆಲಸ ಮಾಡಿದ್ದರಿಂದ ನಾನು ಅವನಿಗೆ ಪ್ರತಿಫಲವಾಗಿ ಈಜಿಪ್ಟ್ ದೇಶವನ್ನು ಕೊಟ್ಟೆನು. ಯಾಕೆಂದರೆ ಅವರು ನನಗೋಸ್ಕರ ಪ್ರಯಾಸಪಟ್ಟರು.” ಇದು ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಸೈನ್ಯ ಸಮೇತನಾಗಿ ನನಗೋಸ್ಕರ ಸೇವೆ ಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಸೈನ್ಯಸಮೇತನಾಗಿ ನನಗೋಸ್ಕರ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಅವನು ಸೈನ್ಯಸಮೇತ ನನ್ನ ಪರವಾಗಿ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಈಜಿಪ್ಟ್ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಈಜಿಪ್ಟ್ ದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಸೇವೆಮಾಡಿದ್ದಾರೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.