Ezekiel 29:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ದಿವಸದಲ್ಲಿ ಇಸ್ರೇಲ್ ವಂಶವನ್ನು ನಾನು ಘಲಪಡಿಸುವೆನು. ಯೆಹೆಜ್ಕೇಲನೇ, ನೀನು ಅವರೊಂದಿಗೆ ಮಾತನಾಡುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವನೆಂದು ತಿಳಿದುಕೊಳ್ಳುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”
Kannada BSI Bible 2016
ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ನಾನು ಇಸ್ರಾಯೇಲ್‍ವಂಶಕ್ಕೆ ಕೊಂಬನ್ನು ಮೊಳೆಯಿಸಿ ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.
Kannada Bible (KNCL) BSI 2016
“ಆ ದಿನದಲ್ಲಿ ನಾನು ಇಸ್ರಯೇಲ್ ವಂಶಕ್ಕೆ ಕೋಡುಮೂಡಿಸಿ ಆ ವಂಶದವರ ಮಧ್ಯೆ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಖಚಿತವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದಿನದಲ್ಲಿ ನಾನು ಇಸ್ರಾಯೇಲರ ಮನೆತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.”