Ezekiel 29:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘“ಆದರೆ ನಾನು ನಿನ್ನ ದವಡೆಗಳಿಗೆ ಕೊಂಡಿಗಳನ್ನು ಸಿಕ್ಕಿಸುವೆನು. ನೈಲ್ ನದಿಯ ಮೀನುಗಳು ನಿನ್ನ ಪೊರೆಗಳಿಗೆ ಸಿಲುಕಿಕೊಳ್ಳುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನಿನ್ನ ದವಡೆಗಳಿಗೆ ಗಾಳ ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ, ಆ ಮೀನುಗಳ ಸಹಿತ ನಿನ್ನನ್ನು ನೈಲ್ ನದಿಯ ಮಧ್ಯದೊಳಗಿಂದ ಹೊರಗೆ ಎಳೆದು ಹಾಕುವೆನು.
Kannada BSI Bible 2016
ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನ ದವಡೆಗಳಿಗೆ ಗಾಳಹಾಕಿ ನಿನ್ನ ನದಿಯ ಮೀನುಗಳು ನಿನ್ನ ಬೆನ್ನುಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ಅಂಟಿಕೊಂಡಿರುವ ಆ ಮೀನುಗಳ ಸಹಿತ ನಿನ್ನನ್ನು ನಿನ್ನ ನದಿಯ ಮಧ್ಯದೊಳಗಿಂದ ಈಚೆಗೆ ಎಳೆದು
Kannada Bible (KNCL) BSI 2016
ನಾನು ನಿನ್ನ ದವಡೆಗಳಿಗೆ ಗಾಳಹಾಕುವೆನು; ನಿನ್ನ ನದಿಯ ಮೀನುಗಳು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ಅಂಟಿಕೊಂಡಿರುವ ಆ ಮೀನುಗಳ ಸಹಿತ ನಿನ್ನನ್ನು ನಿನ್ನ ನದಿಯ ಮಧ್ಯೆಯಿಂದ ಈಚೆಗೆ ಎಳೆಯುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಯೊಳಗಿಂದ ಮೇಲೆ ಎಳೆದು ನಿನ್ನ ಮೀನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು.