Ezekiel 29:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನ್ನನ್ನೂ ನಿನ್ನ ಮೀನುಗಳನ್ನೂ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ನೀನು ನೆಲದ ಮೇಲೆ ಬೀಳುವಿ. ಯಾರೂ ನಿನ್ನನ್ನು ಮೇಲಕ್ಕೆ ಎತ್ತುವುದೂ ಇಲ್ಲ ಹೂಣಿಡುವುದೂ ಇಲ್ಲ. ನಾನು ನಿನ್ನನ್ನು ಕಾಡುಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಣಿಡುವುದೂ ಇಲ್ಲ, ಸೇರಿಸುವುದೂ ಇಲ್ಲ; ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.
Kannada BSI Bible 2016
ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು; ನೀನು ಬೈಲಿನಲ್ಲಿ ಬಿದ್ದಿರುವಿ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಾನು ನಿನ್ನನ್ನು ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.
Kannada Bible (KNCL) BSI 2016
ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನೂ ನಿನ್ನ ನದಿಗಳ ಮೀನುಗಳನ್ನೂ ಅರಣ್ಯದಲ್ಲಿ ಹಾಕುವೆನು. ನೀನು ಬಯಲುಗಳ ಮೇಲೆ ಬಿದ್ದಿರುವೆ; ನಿನ್ನನ್ನು ಯಾರೂ ಹೊರುವುದೂ ಇಲ್ಲ, ಸೇರಿಸುವುದೂ ಇಲ್ಲ. ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರವನ್ನಾಗಿ ಕೊಟ್ಟಿದ್ದೇನೆ.