Ezekiel 29:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲ್ ಜನರು ಈಜಿಪ್ಟಿನ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಅವರ ಕೈಗಳನ್ನೂ ಭುಜಗಳನ್ನೂ ಗಾಯಗೊಳಿಸಿತು. ನಿನ್ನ ಸಹಾಯಕ್ಕಾಗಿ ಅವರು ನಿನ್ನನ್ನು ಆಶ್ರಯಿಸಿದರು. ಆದರೆ ನೀನು ಅವರ ಬೆನೆಐಲುಘನ್ನು ತಿರುಗಿಸಿ ಮುರಿದುಬಿಟ್ಟೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು, ನೀನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ಅವರು ನಿನ್ನ ಮೇಲೆ ಆತುಕೊಳ್ಳುವಾಗ, ನೀನು ಅವರನ್ನು ಒಡೆದು, ಅವರ ಕಾಲುಗಳಿಗೆ ಮತ್ತು ನಡುವಿಗೆ ನಡುಕವನ್ನು ಉಂಟುಮಾಡಿದೆ.
Kannada BSI Bible 2016
ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಐಗುಪ್ತವೇ,] ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದಿ; ಊರಿಕೊಳ್ಳಲು ನೀನು ಒಡೆದು ಅವರೆಲ್ಲರ ನಡುವಿಗೆ ನಡುಕವನ್ನು ಉಂಟುಮಾಡಿದಿ.
Kannada Bible (KNCL) BSI 2016
ಈಜಿಪ್ಟೇ, ಇಸ್ರಯೇಲರು ನಿನ್ನ ಮೇಲೆ ಕೈಯಿಡಲು, ನೀನು ಅವರನ್ನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ನಿನ್ನ ಮೇಲೆ ಊರಿಕೊಳ್ಳಲು, ನೀನು ಒಡೆದು ಅವರೆಲ್ಲರ ನಡುವಿಗೆ ನಡುಕವನ್ನು ಉಂಟುಮಾಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದೆ; ಅವರು ನಿನ್ನನ್ನು ಆದರಿಸಿಕೊಂಡಾಗ ನೀನು ಮುರಿದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.