Ezekiel 3:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನಗೆ, “ನರಪುತ್ರನೇ, ನೀನು ನೋಡುತ್ತಿರುವ ಈ ಸುರುಳಿಯನ್ನು ತಿನ್ನು. ಆಮೇಲೆ ಹೋಗಿ ಇಸ್ರೇಲ್ ವಂಶದವರಿಗೆ ಈ ವಿಷಯಗಳ ಬಗ್ಗೆ ಹೇಳು” ಎಂದು ಅಪ್ಪಣೆಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನಗೆ, “ನರಪುತ್ರನೇ, ನಿನಗೆ ಸಿಕ್ಕಿದ ಈ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು” ಎಂದು ಅಪ್ಪಣೆಕೊಟ್ಟನು.
Kannada BSI Bible 2016
ಇದಾದ ಮೇಲೆ ಆತನು ನನಗೆ--ಮನುಷ್ಯ ಪುತ್ರನೇ, ನಿನಗೆ ಸಿಕ್ಕಿದ್ದನ್ನು ತಿನ್ನು; ಈ ಸುರಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನನಗೆ - ನರಪುತ್ರನೇ, ನಿನಗೆ ಸಿಕ್ಕಿದ ಈ ಸುರಳಿಯನ್ನು ತಿನ್ನು; [ಇದರಲ್ಲಿನ ಸಂಗತಿಗಳನ್ನು] ಇಸ್ರಾಯೇಲ್ ವಂಶದವರಿಗೆ ಸಾರು, ನಡೆ ಎಂದು ಅಪ್ಪಣೆಕೊಟ್ಟನು.
Kannada Bible (KNCL) BSI 2016
ಬಳಿಕ ಸರ್ವೇಶ್ವರ ನನಗೆ, “ನರಪುತ್ರನೇ, ನಿನಗೆ ಕೊಟ್ಟ ಈ ಸುರುಳಿಯನ್ನು ತಿನ್ನು; ಅನಂತರ ಇಸ್ರಯೇಲ್ ವಂಶದವರಿಗೆ ಸಾರು, ಹೋಗು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ ದೇವರು ನನಗೆ, “ಮನುಷ್ಯಪುತ್ರನೇ, ನಿನಗೆ ಸಿಕ್ಕಿದ್ದ ಈ ಸುರುಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಜನರ ಸಂಗಡ ಮಾತನಾಡು,” ಎಂದರು.