Ezekiel 3:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದೇವರಾತ್ಮವು ನನ್ನನ್ನು ಮೇಲಕ್ಕೆ ಎತ್ತಿತು. ಯೆಹೋವನ ಮಹಿಮೆಯು ತನ್ನ ಸ್ಥಳದಿಂದ ಮೇಲೇರಿದಾಗ ನನ್ನ ಹಿಂಭಾಗದಲ್ಲಿ ಮಹಾ ಗುಡುಗುವ ಶಘ್ದವನ್ನು ಕೇಳಿದೆನು. ಅದು ಯೆಹೋವನಿಗೆ ಆತನ ನಿವಾಸದಲ್ಲಿ ಸ್ತೋತ್ರವಾಗಲಿ ಎಂಬ ವಾಣಿಯೊಂದಿಗೆ ಕೇಳಿಸುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.
Kannada BSI Bible 2016
ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ ಮಹಿಮೆಯಿಂದ ಕೂಡಿದ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಭರಭರನೆ ಕೇಳಿಸಿತು.
Kannada Bible (KNCL) BSI 2016
ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ಮಹಿಮೆಯಿಂದ ಕೂಡಿದ ಯೆಹೋವ ದೇವರ ಮಹಿಮೆಯು ಅವರ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.