Ezekiel 3:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಜೀವಿಗಳು ತಮ್ಮ ರೆಕ್ಕೆಗಳನ್ನು ಒಂದಕ್ಕೊಂದು ಘಡಿದಾಡುವ ಸಪ್ಪಳ ಮತ್ತು ಅವುಗಳ ಪಕ್ಕದಲ್ಲಿದ್ದ ಚಕ್ರಗಳ ಸಪ್ಪಳ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿಯುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಭೂಕಂಪದಂಥ ಮಹಾಶಬ್ದವು ನನ್ನ ಕಿವಿಗೆ ಬಿತ್ತು.
Kannada BSI Bible 2016
ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿದಾಡುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಬಿರ್ರನ್ನುವ ಮಹಾಶಬ್ದವು [ನನ್ನ ಕಿವಿಗೆ ಬಿತ್ತು].
Kannada Bible (KNCL) BSI 2016
ಆ ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿದಾಡುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು ಹೀಗೆ ಭೂಕಂಪದಂಥ ಮಹಾಶಬ್ದ ನನ್ನ ಕಿವಿಗೆ ಬಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದವನ್ನೂ, ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ, ಮಹಾ ಘೋಷದ ಶಬ್ದವು ನುಗ್ಗಿ ಬರುತ್ತಿರುವುದನ್ನೂ ಕೇಳಿದೆನು.