Ezekiel 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಊನಕ್ಕೆ ತೆಗೆದುಕೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.
Kannada BSI Bible 2016
ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.
Kannada Bible (KNCL) BSI 2016
ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.