Ezekiel 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಬಾರ್ ಕಾಲುವೆ ಪಕ್ಕದಲ್ಲಿದ್ದ ತೇಲ್ ಆಬೀಙ್‌ನಲ್ಲಿ ಸೆರೆಯಾಳುಗಳಾಗಿದ್ದ ಇಸ್ರೇಲ್ ಜನರ ಬಳಿಗೆ ನಾನು ಒಯ್ಯಲ್ಪಟ್ಟೆನು. ಅಲ್ಲಿದ್ದ ಜನರ ಮಧ್ಯೆ ನಾನು ಏಳು ದಿವಸ ಸ್ತಘ್ಧನಾಗಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.
Kannada BSI Bible 2016
ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು ಅವರು ಕೂತಿದ್ದ ಸ್ಥಳದಲ್ಲಿಯೇ ಕೂತುಕೊಂಡೆನು; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಇದ್ದುಬಿಟ್ಟೆನು.
Kannada Bible (KNCL) BSI 2016
ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್‍ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೆಲ್ ಅಬೀಬಿನ ಸೆರೆಯವರ ಬಳಿಗೆ ಬಂದೆನು. ನಾನು ಬಹು ದುಃಖಿತನಾಗಿ ಅವರು ಕುಳಿತಿದ್ದ ಕಡೆಗೆ ನಾನು ಏಳು ದಿನಗಳ ಕಾಲ ಅವರ ಜೊತೆಗೆ ಕುಳಿತುಕೊಂಡೆನು.